HomeIndiaBIG NEWS: ಮಹಾಕುಂಭದಲ್ಲಿ ಸಂಭವಿಸಿದ ದುರಂತಕ್ಕೆ ಆಡಳಿತ ವೈಫಲ್ಯವೇ ಕಾರಣ; ಧಾರ್ಮಿಕ ಗುರು ಪ್ರೇಮಾನಂದ ಪುರಿ...

BIG NEWS: ಮಹಾಕುಂಭದಲ್ಲಿ ಸಂಭವಿಸಿದ ದುರಂತಕ್ಕೆ ಆಡಳಿತ ವೈಫಲ್ಯವೇ ಕಾರಣ; ಧಾರ್ಮಿಕ ಗುರು ಪ್ರೇಮಾನಂದ ಪುರಿ ಗಂಭೀರ ಆರೋಪ

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭೀಕರ ಘಟನೆ ನಡೆದಿದ್ದು, ತ್ರಿವೇಣಿ ಸಂಗಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಡಳಿತ ವ್ಯವಸ್ಥೆಯೇ ಕಾರಣ ಎಂದು ಧಾರ್ಮಿಕ ಗುರು ಪ್ರೇಮಾನಂದ ಪುರಿ ಆರೋಪಿಸಿದ್ದಾರೆ.

ಮಹಾಮಂಡಲೇಶ್ವರ ಪ್ರೇಮಾನಂದ ಪುರಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಮಹಾಕುಂಭದ ಸಿದ್ಧತೆಗಳ ಬಗ್ಗೆ ಆಡಳಿತವು ಗಮನ ಹರಿಸಿರಲಿಲ್ಲ ಎಂದು ಹೇಳಿದ್ದಾರೆ. “ಆಡಳಿತವು ಕೇವಲ ವಿಐಪಿಗಳಿಗೆ ಸೇವೆ ಸಲ್ಲಿಸುವಲ್ಲಿ ನಿರತವಾಗಿತ್ತು. ಮಹಾಕುಂಭಕ್ಕೆ ಯಾವುದೇ ಸಿದ್ಧತೆಗಳನ್ನು ಮಾಡಲಿಲ್ಲ” ಎಂದು ಅವರು ತಿಳಿಸಿದ್ದಾರೆ.

ಮಹಾಕುಂಭದ ನಿರ್ವಹಣೆಯನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು ಎಂದ ಅಭಿಪ್ರಾಯಪಟ್ಟ ಅವರು “ಎಲ್ಲಾ ಅಖಂಡಗಳು ಮಹಾಕುಂಭವನ್ನು ಭಾರತೀಯ ಸೇನೆಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದ್ದೇವು. ನಮ್ಮ ದೇಶದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಜನರ ಕೊರತೆಯಿಲ್ಲ. ಮಹಾಕುಂಭವನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ್ದರೆ, ಇಷ್ಟೊಂದು ದೊಡ್ಡ ದುರಂತ ಸಂಭವಿಸುತ್ತಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ನಾನು ಬಹಳವಾಗಿ ದುಃಖಿತನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ನಡೆದ ‘ಶಾಹಿ ಸ್ನಾನ’ದಲ್ಲಿ ಭಾಗವಹಿಸಲು ಲಕ್ಷಾಂತರ ಜನರು ಸೇರಿದ್ದರಿಂದ ಉಂಟಾದ ನೂಕುನುಗ್ಗಲಿನಲ್ಲಿ ಈ ಕಾಲ್ತುಳಿತ ಸಂಭವಿಸಿದೆ. ಈ ಘಟನೆ ನಂತರ ಅನೇಕ ಭಕ್ತರು ಸಂಗಮದಿಂದ ಹಿಂತಿರುಗಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ಹಲವು ಅಖಂಡಗಳು ತಮ್ಮ ‘ಸ್ನಾನ’ವನ್ನು ಮುಂದೂಡಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular