HomeKarnatakaರೀಲ್ಸ್ ಮಂಜು ಪೊಲೀಸ್ ವಶಕ್ಕೆ

ರೀಲ್ಸ್ ಮಂಜು ಪೊಲೀಸ್ ವಶಕ್ಕೆ

ದೇವನಹಳ್ಳಿ: ಇತ್ತೀಚಿನ ದಿನಗಳಲ್ಲಿ ರೀಲ್ಸ್ ಕ್ರೇಜ್ ಚಿಕ್ಕಮಕ್ಕಳಿಂದ ಹಿಡಿದು ದೊಡ್ದವರೆಗೂ ಹೆಚ್ಚುತ್ತಿದೆ. ರೀಲ್ಸ್ ಹುಚ್ಚಾಟಕ್ಕೆ ಸಂಚಾರ ನಿಯಮಗಳನ್ನೇ ಉಲ್ಲಂಘನೆ ಮಾಡಿ ಬೈಕ್ ನಲ್ಲಿ ಓಡಾಡಿದ್ದ ರೀಲ್ಸ್ ಮಂಜುನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿ ಸಂಭ್ರಮಿಸಿದ್ದ ರೀಲ್ಸ್ ಮಂಜುಗೆ ಪೊಲೀಸರು ಶಾಕ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ 1000 ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular