ಲೈಂಗಿಕ ಕಿರುಕುಳ ಆರೋಪ : ಖ್ಯಾತ ಸೀರಿಯಲ್ ನಿರ್ಮಾಪಕನ ವಿರುದ್ಧ ದೂರು ದಾಖಲು

ಮುಂಬೈ: ಜನಪ್ರಿಯ ದೂರದರ್ಶನ ಸರಣಿ ‘ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ’ ನಿರ್ಮಾಪಕ ಅಸಿತ್ ಮೋದಿ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ.

ನಟಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಸಿತ್ ಮೋದಿ ಅವರಲ್ಲದೆ, ಕಾರ್ಯನಿರ್ವಾಹಕ ನಿರ್ಮಾಪಕ ಜತಿನ್ ಬಜಾಜ್ ಮತ್ತು ಅವರ ಸಹಾಯಕ ಕಾರ್ಯಾಚರಣೆ ಮುಖ್ಯಸ್ಥ ಸೊಹೈಲ್ ರಮಣಿ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರದಲ್ಲೇ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಗೋರೆಗಾಂವ್ ಫಿಲ್ಮ್ ಸಿಟಿ ಮತ್ತು ಸಿಂಗಾಪುರದಲ್ಲಿ ಧಾರಾವಾಹಿಯ ಚಿತ್ರೀಕರಣದ ಸಮಯದಲ್ಲಿ ಆರೋಪಿಗಳು ತನಗೆ ಕಿರುಕುಳ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸೋಮವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read