HomeIndiaBREAKING : ‘ಜ್ಞಾನವಾಪಿ ಮಸೀದಿ’ ಬೋರ್ಡ್ ತೆರವು, ‘ಜ್ಞಾನವಾಪಿ ಮಂದಿರ’ ಎಂದು ಮರುನಾಮಕರಣ

BREAKING : ‘ಜ್ಞಾನವಾಪಿ ಮಸೀದಿ’ ಬೋರ್ಡ್ ತೆರವು, ‘ಜ್ಞಾನವಾಪಿ ಮಂದಿರ’ ಎಂದು ಮರುನಾಮಕರಣ

ವಿವಾದಿತ ‘ಜ್ಞಾನವಾಪಿ ಮಸೀದಿ’ ಗೆ ‘ಜ್ಞಾನವಾಪಿ ಮಂದಿರ’ ಎಂದು ಮರುನಾಮಕರಣ ಮಾಡಲಾಗಿದ್ದು, ಅಲ್ಲಿದ್ದ ಹಳೆಯ ಬೋರ್ಡ್ ನ್ನು ತೆರವುಗೊಳಿಸಲಾಗಿದೆ.

ಜ್ಞಾನವಾಪಿ ಮಸೀದಿಯಲ್ಲ, ಮಂದಿರ ಎಂದು ಅಲ್ಲಿ ಬೋರ್ಡ್ ಹಾಕಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಿನ್ನೆಯಿಂದ ಜ್ಞಾನವ್ಯಾಪಿಯಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ.

31 ವರ್ಷಗಳ ನಂತರ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪೂಜೆ ನಡೆಯುತ್ತಿದೆ. ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರ (ಜನವರಿ 31) ಆವರಣದಲ್ಲಿರುವ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜಿಸುವ ಹಕ್ಕನ್ನು ನೀಡುವಂತೆ ಆದೇಶಿಸಿದೆ. ಈ ಮೂಲಕ ಜ್ಞಾನವಾಪಿಯ ವ್ಯಾಸ್ ಜಿ ಅವರ ನೆಲಮಾಳಿಗೆಯಲ್ಲಿ ಹಿಂದೂಗಳು ಪೂಜಿಸುವ ಹಕ್ಕನ್ನು ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ನಿಂದ ನಾಮನಿರ್ದೇಶನಗೊಂಡ ಅರ್ಚಕರು ಪೂಜೆ ನಡೆಸಲು ವ್ಯವಸ್ಥೆ ಮಾಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತು. ಜನವರಿ 17 ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯವು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ರಿಸೀವರ್ ಆಗಿ ನೇಮಿಸಿ, ನೆಲಮಾಳಿಗೆಯನ್ನು ಸುರಕ್ಷಿತವಾಗಿಡಲು ಮತ್ತು ಅದರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಂತೆ ನಿರ್ದೇಶಿಸಿತು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular