HomeLatest Newsಖಾಸಗಿ ಶಾಲೆಗಳ ಮಾನ್ಯತೆ ನವೀಕರಣ : ಫೆ. 16ರ ವರೆಗೆ ಗಡುವು ವಿಸ್ತರಣೆ

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ : ಫೆ. 16ರ ವರೆಗೆ ಗಡುವು ವಿಸ್ತರಣೆ

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ ನವೀಕರಣಕ್ಕೆ ಇದೇ ಫೆಬ್ರವರಿ 16ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ನಡೆಸಲು ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ಪಡೆಯುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾನ್ಯತೆ ನವೀಕರಿಸಲು 2026ರ ಫೆಬ್ರವರಿ 16 ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಅರ್ಹ ಶಾಲಾ ಆಡಳಿತ ಮಂಡಳಿಗಳು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular