ಹುಟ್ಟು ಹಬ್ಬದ ಸಂಭ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್

ಭಾರತದ ಖ್ಯಾತ ಸಂಗೀತ ನಿರ್ದೇಶಕ ‘ಕಾಂತಾರ’ ಖ್ಯಾತಿಯ ಅಜನೀಶ್ ಲೋಕನಾಥ್ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2009ರಲ್ಲಿ ತೆರೆ ಕಂಡ ಮಂಜು ಸ್ವರಾಜ್ ನಿರ್ದೇಶನದ ‘ಶಶಿರ’ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡುವ ಮೂಲಕ ಸಂಗೀತ ನಿರ್ದೇಶಕರಾಗಿ  ಪಾದಾರ್ಪಣೆ ಮಾಡಿದರು. ಬಳಿಕ ‘ಉಳಿದವರು ಕಂಡಂತೆ’  ‘ಇಷ್ಟ ಕಾವ್ಯ’ ‘ಕಿರಿಕ್ ಪಾರ್ಟಿ’ ಸೇರಿದಂತೆ ಸಾಲು ಸಾಲು ಸಿನಿಮಾಗಳಿಗೆ ಮ್ಯೂಸಿಕ್ ಕಂಪೋಸ್ ಮಾಡುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ತಮ್ಮ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡರು.

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ್ದ ‘ಕಾಂತಾರ’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ ಇವರು ದೊಡ್ಡ ಮಟ್ಟಿಗೆ ಯಶಸ್ಸು  ಕಂಡರು. 2022ರಂದು ತೆರೆ ಕಂಡು ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ ಈ ಚಿತ್ರದ ಸಂಗೀತಕ್ಕೆ ಎಆರ್ ರೆಹಮಾನ್ ಕೂಡ ಫಿದಾ ಆಗಿದ್ದರು. ಇಂದು ಸಾಮಾಜಿಕ ಜಾಲತಾಣದಲ್ಲಿ ಅಜನೀಶ್ ಲೋಕನಾಥ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read