ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಇಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ(KSTA) ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜೀವಮಾನ ಸಾಧನೆ ಪ್ರಶಸ್ತಿ’ಗಳನ್ನು ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಪ್ರದಾನ ಮಾಡಿದರು.
ಪ್ರೊ. ಸಿ.ಎನ್.ಆರ್. ರಾವ್ – ಕೆಎಸ್‌ಟಿಎ ಜೀವಮಾನ ಸಾಧನೆ ಪ್ರಶಸ್ತಿ:
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಭಾರತೀಯ ಪ್ರಾಣಿಶಾಸ್ತ್ರ ಸರ್ವೇಕ್ಷಣಾ ಇಲಾಖೆಯ (ZSI) ಮಾಜಿ ನಿರ್ದೇಶಕರು ಹಾಗೂ ಖ್ಯಾತ ವಿಜ್ಞಾನಿಗಳಾದ ಡಾ. ರಾಮಕೃಷ್ಣ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕನ್ನಡದಲ್ಲಿ ವಿಜ್ಞಾನ ಸಂವಹನಕ್ಕಾಗಿ ಜೀವಮಾನ ಸಾಧನೆ ಪ್ರಶಸ್ತಿ:
ಕನ್ನಡ ಭಾಷೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು (STEAM) ಜನಪ್ರಿಯಗೊಳಿಸುವಲ್ಲಿ ಮಹತ್ತರ ಸೇವೆ ಸಲ್ಲಿಸಿದ ಸಿಎಫ್‌ಟಿಆರ್‌ಐ (CFTRI) ಸಂಸ್ಥೆಯ ಮಾಜಿ ವಿಜ್ಞಾನಿ ಶ್ರೀಮತಿ ಹರಿಪ್ರಸಾದ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

