ದಾವಣಗೆರೆ: ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಆಗಸ್ಟ್ 23ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ರೇಣುಕಾಚಾರ್ಯ ರಸ್ತೆ ತಡೆ ನಡೆಸಿ ಧರಣಿ ನಡೆಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ, ಡಿಸಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.