HomeKarnatakaBREAKING : ರೇಣುಕಾಸ್ವಾಮಿ ಕೊಲೆ ಕೇಸ್‌: ಸೆ. 2ರಂದು ಸಾಕ್ಷ್ಯ ನೀಡುವಂತೆ ಪ್ರದೋಷ್‌'ಗೆ ಕೋರ್ಟ್...

BREAKING : ರೇಣುಕಾಸ್ವಾಮಿ ಕೊಲೆ ಕೇಸ್‌: ಸೆ. 2ರಂದು ಸಾಕ್ಷ್ಯ ನೀಡುವಂತೆ ಪ್ರದೋಷ್‌’ಗೆ ಕೋರ್ಟ್ ಸಮನ್ಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದಲ್ಲಿ ಸಾಕ್ಷ್ಯ ನೀಡುವಂತೆ ಪ್ರದೋಷ್‌ಗೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

ಸೆಪ್ಟೆಂಬರ್ 2ರಂದು ಸಾಕ್ಷ್ಯ ನೀಡುವಂತೆ ಸೂಚನೆ ನೀಡಲಾಗಿದೆ. ಸಾಕ್ಷಿದಾರರ ವಿಚಾರಣೆಗೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಅವರು ಪ್ರದೋಷ್‌ಗೆ ವಿಟ್ನೆಸ್ ಸಮನ್ಸ್ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.

ಎಸ್‌ಪಿಪಿ ಮನವಿಯನ್ನು ಪರಿಗಣಿಸಿದ ಕೋರ್ಟ್, ಪ್ರದೋಷ್‌ಗೆ ಸಮನ್ಸ್ ಜಾರಿಗೊಳಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸೆಪ್ಟೆಂಬರ್ 2ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನೀಡಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್‌ ನ್ಯಾಯಾಲಯ ಅಂಗೀಕರಿಸಿತ್ತು. ಇದೀಗ ಸಾಕ್ಷಿ ಒದಗಿಸುವಂತೆ ಸಮನ್ಸ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ತಿಳಿದಿರುವ ಎಲ್ಲ ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವುದಾಗಿ ಪ್ರದೋಷ್‌ ಹೇಳಿದ್ದಾನೆ. ಹೀಗಾಗಿ ಇದೀಗ ಆತ ಪ್ರಕರಣದಲ್ಲಿ ಆರೋಪಿಯಾಗಿರುವ ಬದಲು ಮಾಫಿ ಸಾಕ್ಷಿಯಾಗಿ ಇತರ ಆರೋಪಿಗಳ ವಿರುದ್ಧ ಸಾಕ್ಷ್ಯ ನೀಡಲಿದ್ದಾನೆ.

ನ್ಯಾಯಾಲಯವು ಪ್ರದೋಷ್‌ಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಆತ ನ್ಯಾಯಾಂಗ ಬಂಧನದಲ್ಲೇ ಇರಬೇಕು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಮುಚ್ಚಿಟ್ಟರೆ ಅಥವಾ ಸುಳ್ಳು ಮಾಹಿತಿ ನೀಡಿದರೆ ಮಾಫಿ ಸಾಕ್ಷಿ ಸ್ಥಾನವನ್ನು ರದ್ದುಗೊಳಿಸಿ ಮತ್ತೆ ಆರೋಪಿಯನ್ನಾಗಿ ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

ಪ್ರದೋಷ್‌ ಮಾಫಿ ಸಾಕ್ಷಿಯಾಗಿರುವುದು ಪ್ರಕರಣದ ತನಿಖೆ ಮತ್ತು ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಇದರಿಂದ ದರ್ಶನ್ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ಪ್ರಕರಣಕ್ಕೆ ಮತ್ತಷ್ಟು ಸಾಕ್ಷ್ಯ ಲಭ್ಯವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular