HomeKarnatakaBREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು...

BREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಇಂದು ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘ ಪ್ರತಿವಾದ ಮಂಡನೆ ಆಲಿಸಿತು. ಬಳಿಕ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್, ನಾಳೆ ಬೆಳಿಗ್ಗೆ 11:30ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ನಾಳೆ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಲಿದ್ದಾರೆ.

ಇನ್ನು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ಕುರಿತ ಆದೇಶ ಅಕ್ಟೋಬರ್ 14ರಂದು ಪ್ರಕಟವಾಗಲಿದೆ. ಅದೇ ದಿನ ಎ8, ಎ11, ಎ12, ಎ13 ಜಾಮೀನು ಕುರಿತ ಆದೇಶ ಕೂಡ ಹೊರಬೀಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular