HomeLatest Newsರೇಣುಕಾಸ್ವಾಮಿ ಕೊಲೆ ಕೇಸ್ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ದರ್ಶನ್ ಅರ್ಜಿ ವಿಚಾರಣೆ ವೇಳೆ...

ರೇಣುಕಾಸ್ವಾಮಿ ಕೊಲೆ ಕೇಸ್ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತನ ಆಗ್ರಹ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಅವರ ಅರ್ಜಿಯ ವಿಚಾರಣೆ ವೇಳೆ ಅಪರಿಚಿತನೊಬ್ಬ ನ್ಯಾಯಾಲಯಕ್ಕೆ ನುಗ್ಗಿದ್ದಾನೆ.

ಬೆಂಗಳೂರಿನ ಸಿಸಿಹೆಚ್ 64ನೇ ಕೋರ್ಟ್ ಗೆ ಪತ್ರ ಹಿಡಿದು ಅಪರಿಚಿತ ನುಗ್ಗಿದ ಘಟನೆ ನಡೆದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಅಪರಿಚಿತ ವ್ಯಕ್ತಿ ಹೇಳಿದ್ದಾನೆ.

ನೀವು ಯಾರು ಎಂದು ಅಪರಿಚಿತ ವ್ಯಕ್ತಿಯನ್ನು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ನಾನು ರವಿ ಬೆಳಗೆರೆ ಕಡೆಯವನು ಎಂದು ಅಪರಿಚಿತ ನ್ಯಾಯಾಧೀಶರ ಮುಂದೆ ಹೇಳಿದ್ದಾನೆ. ಏನೇ ಇದ್ದರೂ ಸರ್ಕಾರದ ಮುಖಾಂತರ ಬರುವಂತೆ ಜಡ್ಜ್ ಸೂಚಿಸಿದ್ದಾರೆ. ನಿಮ್ಮ ಅರ್ಜಿಯನ್ನು ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ದರ್ಶನ್ ಕೇಸ್ ನ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಸೆ. 9ಕ್ಕೆ ಕೋರ್ಟ್ ಆದೇಶ ಕಾಯ್ದಿರಿಸಿದೆ. ದರ್ಶನ್ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಸ್ಥಳಾಂತರ ಕೋರಿದ ಅರ್ಜಿ ಮತ್ತು ಹೆಚ್ಚುವರಿ ದಿಂಬು, ಬೆಡ್ ಶೀಟ್ ನೀಡುವಂತೆ ದರ್ಶನ್ ಕೋರಿದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಸೆಪ್ಟೆಂಬರ್ 9ರಂದು ಸಿಸಿಹೆಚ್ 64ನೇ ನ್ಯಾಯಾಲಯ ಆದೇಶ ಪ್ರಕಟಿಸಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular