HomeKarnatakaರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಹೆಸರು ಬರದಂತೆ ಡೀಲ್ ಮಾಡಿದ್ದ 30 ಲಕ್ಷ ಹಣ ಜಪ್ತಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಹೆಸರು ಬರದಂತೆ ಡೀಲ್ ಮಾಡಿದ್ದ 30 ಲಕ್ಷ ಹಣ ಜಪ್ತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹೆಸರು ಹೊರಬರದಂತೆ ಡೀಲ್ ಮಾಡಿದ್ದ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹೆಸರು ಹೊರಬರದಂತೆ ಆರೋಪಿಗಳು 30 ಲಕ್ಷ ಡೀಲ್ ಮಾಡಿ ಹಣ ಪಡೆದಿದ್ದರು ಎನ್ನಲಾಗಿದೆ. ದರ್ಶನ್ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಈ ಹಣವನ್ನು ವಶಕ್ಕೆ ಪಡೆದಿದ್ದಾರೆ.

ದರ್ಶನ್ ಕೊಟ್ಟಿದ್ದ 30 ಲಕ್ಷ ಹಣ ದರ್ಶನ್ ಆಪ್ತನ ಮನೆಯಲ್ಲಿತ್ತು. ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಹಣ ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳಲು ಮೃತದೇಹ ಸಾಗಿಸಲು ಹಾಗೂ ದರ್ಶನ್ ಹೆಸರು ಬಾಯಿಬಿಡದಂತೆ ಬಂಧಿತರ ಪೈಕಿ ಐವರಿಗೆ 30 ಲಕ್ಷ ಡೀಲ್ ನೀಡಲಾಗಿತ್ತು. ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಸಾಗಿಸಲು ಮೂವರು ಆರೋಪಿಗಳಿಗೆ ಮುಂಗಡವಾಗಿ 5 ಲಕ್ಷ ಸಂದಾಯವಾಗಿತ್ತು. ಉಳಿದ ಇಬ್ಬರು ಆರೋಪಿಗಳು ಜೈಲು ಸೇರಿದ ಬಳಿಕ ಅವರ ಮನೆಯವರಿಗೆ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಈ ವಿಚಾರವನ್ನು ಆರೋಪಿಗಳು ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular