BREAKING : ನಟ ದರ್ಶನ್ & ಗ್ಯಾಂಗ್ ಕಸ್ಟಡಿಗೆ ಪಡೆಯಲು ಪೊಲೀಸರಿಗೆ ಸುಪ್ರೀಂಕೋರ್ಟ್ ಸೂಚನೆ

ಬೆಂಗಳೂರು :  ನಟ ದರ್ಶನ್ & ಗ್ಯಾಂಗ್ ಕಸ್ಟಡಿಗೆ ಪಡೆಯಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇಂದೇ ಬಂಧನವಾಗುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದ್ದು, ಇಂತಹ “ಗಂಭೀರ ಪ್ರಕರಣ”ದಲ್ಲಿ ಜಾಮೀನು ನೀಡುವುದರಿಂದ ಆರೋಪಿಗಳ ಪ್ರಭಾವ ಉಂಟಾಗುತ್ತದೆ ಎಂದು ಹೇಳಿದೆ.

ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲ ನೇತೃತ್ವದ ಪೀಠವು ಕರ್ನಾಟಕ ಹೈಕೋರ್ಟ್‌ನ ಹಿಂದಿನ ತೀರ್ಪನ್ನು ರದ್ದುಗೊಳಿಸಿ ಈ ತೀರ್ಪು ನೀಡಿದೆ. ದರ್ಶನ್ ಅವರನ್ನು ತಕ್ಷಣ ಬಂಧಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ಶಾಕ್ ನೀಡಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ತೀರ್ಪು ಪ್ರಕಟಿಸಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತಕ್ಷಣ ದರ್ಶನ್ ಸೇರಿದಂತೆ ಏಳು ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸ ಫಿಕ್ಸ್ ಆಗಿದೆ.

ಜೈಲಿನಲ್ಲಿರುವಾಗ ನಟ ದರ್ಶನ್ ಗೆ  ಜೈಲಿನಲ್ಲಿ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ , ಪೊಲೀಸ್ ಅಧೀಕ್ಷಕರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಗರಂ ಆಗಿದೆ. ಹಾಗೂ ಹೈಕೋರ್ಟ್ ಆದೇಶದ ಲೋಪವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದು ಸುಪ್ರೀಂಕೋರ್ಟ್ ಆರೋಪಿಸಿದೆ. ಆರೋಪಿ ಜೈಲಿನ ಲಾಲ್ ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಕ್ರಮ ಎಂದು  ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read