HomeKarnatakaರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಬಳಿಕ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ...

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಬಳಿಕ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣ ಸಾಕ್ಷಿ ಹೇಳಿಕೆ ಬೆನ್ನಲ್ಲೇ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ಪೊಲೀಸರು ಸಿಆರ್ಪಿಸಿ 164ರ ಅಡಿ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ.

ಇದರೊಂದಿಗೆ ದರ್ಶನ್ ಅವರಿಗೆ ಅವರ ಆಪ್ತರೇ ಸಾಕ್ಷಿಗಳಾಗಿರುವುದು ಸಂಕಷ್ಟ ತಂದಿದೆ. ರೇಣುಕಾಸ್ವಾಮಿ ಹತ್ಯೆಗೆ ಮೊದಲು ದರ್ಶನ್ ಅವರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಕಾರಣ ನಟ ಯಶಸ್ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ.

ಇದೇ ಪಾರ್ಟಿಯಲ್ಲಿ ಭಾಗವಹಿಸಿದ್ದ ನಟ ಚಿಕ್ಕಣ್ಣ ಕೂಡ ಸಾಕ್ಷಿಯಾಗಿ ಈಗಾಗಲೇ ಹೇಳಿಕೆ ದಾಖಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ಮುನ್ನ ರಾಜರಾಜೇಶ್ವರಿ ನಗರದಲ್ಲಿರುವ ಪ್ರಕರಣದ ಆರೋಪಿ ವಿನಯ್ ಒಡೆತನದ ಸ್ಟೋನಿ ಬ್ರೂಕ್ಸ್ ಪಬ್ ನಲ್ಲಿ ದರ್ಶನ್ ಅವರೊಂದಿಗೆ ಚಿಕ್ಕಣ್ಣ ಮತ್ತು ಯಶಸ್ ಊಟ ಮಾಡಿದ್ದರು. ಹತ್ಯೆ ನಡೆದ ದಿನ ಪಬ್ ನಲ್ಲಿ ದರ್ಶನ್ ಅವರೊಂದಿಗೆ ಈ ಇಬ್ಬರು ನಟರು ಇದ್ದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಹಿನ್ನಲೆಯಲ್ಲಿ ನಟರಾದ ಚಿಕ್ಕಣ್ಣ ಮತ್ತು ಯಶಸ ಅವರನ್ನು ಪೊಲೀಸರು ಸಾಕ್ಷಿಗಳಾಗಿ ಪರಿಗಣಿಸಿ ಹೇಳಿಕೆ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular