HomeKarnatakaರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪ್ರಬಲ ಸಾಕ್ಷ್ಯ ಲಭ್ಯ ಹಿನ್ನಲೆ ನಟ ದರ್ಶನ್ ಗೆ...

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪ್ರಬಲ ಸಾಕ್ಷ್ಯ ಲಭ್ಯ ಹಿನ್ನಲೆ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಫಿಕ್ಸ್: ಎ1 ಆರೋಪಿಯಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ

 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮತ್ತಷ್ಟು ಸಂಕಷ್ಟ ಫಿಕ್ಸ್ ಆಗಿದೆ.

ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಮಾಡಲು ಸಿದ್ಧತೆ ನಡೆಸಲಾಗಿದೆ. ದರ್ಶನ್ ಪ್ರಕರಣದಲ್ಲಿ ಎ2 ಆಗಿದ್ದು, ಅವರನ್ನು ಎ1 ಆರೋಪಿ ಮಾಡಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾಗೌಡ ಮೊದಲನೇ ಆರೋಪಿಯಾಗಿ ಮಾಡಲಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ಅವರನ್ನು ಮೊದಲನೇ ಆರೋಪಿಯಾಗಿ ಮಾಡಿ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ವಿರುದ್ಧ ಮತ್ತಷ್ಟು ಪ್ರಬಲ ಸಾಕ್ಷ್ಯ ಲಭ್ಯವಾಗಿವೆ. ಆರೋಪಿಗಳ ಮೊಬೈಲ್ ನಲ್ಲಿದ್ದ ನಾಲ್ಕು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ರೇಣುಕಾ ಸ್ವಾಮಿ ರಕ್ತಸಿಕ್ತವಾಗಿರುವ ನಾಲ್ಕು ಫೋಟೋಗಳು ಲಭ್ಯವಾಗಿವೆ. ರೇಣುಕಾ ಸ್ವಾಮಿ ಕೈ ಮುಗಿಯುತ್ತಿರುವ ಫೋಟೋ ಹಾಗೂ ರಕ್ತದ ಮಡುವಿನಲ್ಲಿ ಬಿದ್ದಿರುವ ಫೋಟೋಗಳು ಲಭ್ಯವಾಗಿವೆ. ಆರೋಪಿ ಪ್ರದೋಶ್ ಮೊಬೈಲ್ ನಲ್ಲಿ ಹಾಗೂ ಮತ್ತೊಬ್ಬ ಆರೋಪಿ ಮೊಬೈಲ್ ನಲ್ಲಿದ್ದ ಫೋಟೋಗಳನ್ನು ಹೈದರಾಬಾದ್ ಎಫ್ಎಸ್ಎಲ್ ನಲ್ಲಿ ರಿಟ್ರೀವ್ ಮಾಡಲಾಗಿದೆ.

ಈ ಫೋಟೋಗಳು ರೇಣುಕಾಸ್ವಾಮಿ ಕೊಲೆಗೆ ಮಹತ್ವದ ಸಾಕ್ಷಿಯಾಗಿವೆ. ದರ್ಶನ್ ಆಣತಿಯಂತೆ ರೇಣುಕಾಸ್ವಾಮಿ ಅಪಹರಿಸಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಬಳಿಕ ಶವ ವಿಲೇವಾರಿಗೆ ದರ್ಶನ್ ಹಣ ಕೊಟ್ಟಿದ್ದಾರೆ. ಹೀಗಾಗಿ ನಟ ದರ್ಶನ್ ಅವರನ್ನು ಮೊದಲನೇ ಆರೋಪಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular