ರೇಣುಕಾಸ್ವಾಮಿ ಕೊಲೆ ಕೇಸ್ : ಇಂದು ಕೋರ್ಟ್ ನಲ್ಲಿ ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ.!

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪ್ರದೋಷ್ ಮತ್ತು ಜಗದೀಶ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಇಂದು ಸೋಮವಾರ ನಡೆಯಲಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಎ-6 ಆರೋಪಿ ಜಗದೀಶ್ ಪರ ರಂಗನಾಥ ರೆಡ್ಡಿ ವಾದ ಮಂಡಿಸಲಿದ್ದು, ಎ-14 ಆರೋಪಿ ಪ್ರದೋಷ್ ಪರ ವಕೀಲ ಪರಶುರಾಮ್ ವಾದ ಮಂಡಿಸಲಿದ್ದಾರೆ. ಇಬ್ಬರಿಗೆ ಕೋರ್ಟ್ ಜಾಮೀನು ನೀಡುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ ವಾದ ಆಲಿಸಿದ ನ್ಯಾಯಾಲಯ ಅಕ್ಟೋಬರ್ 8ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read