ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಪ್ರಾಸಿಕ್ಯೂಷನ್ ಸಲ್ಲಿಸಿದ ಅರ್ಜಿ ಇತ್ಯರ್ಥಪಡಿಸಲಾಗಿದೆ. ಸಿಆರ್ಪಿಸಿ ಸೆಕ್ಷನ್ 294 ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥಪಡಿಸಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ ಬಹುತೇಕ ಆರೋಪಿಗಳಿಂದ ಆಕ್ಷೇಪ ವ್ಯಕ್ತವಾಗಿದೆ.
ದಾಖಲೆಗಳನ್ನು ಮಾರ್ಕ್ ಮಾಡಲು ಆರೋಪಿಗಳು ಸಮ್ಮತಿ ನೀಡಿಲ್ಲ. ಚಿತ್ರದುರ್ಗ ಜೈಲಿಗೆ ಇಬ್ಬರು ಆರೋಪಿಗಳು ವರ್ಗಾವಣೆ ಕೋರಿದ್ದಾರೆ. 6ನೇ ಆರೋಪಿ ಜಗದೀಶ್, 7ನೇ ಆರೋಪಿ ಅನುಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಇವನ್ನು ಕೋರ್ಟ್ ನಿರ್ಧರಿಸಬೇಕಿದೆ.
ದೋಷಾರೋಪಗಳನ್ನು ದರ್ಶನ್ ಮತ್ತು ಸಹಚರರು ನಿರಾಕರಿಸಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಬೇಕಾದ ಸಾಕ್ಷಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಪ್ರಾಸಿಕ್ಯೂಷನ್ ನಿಂದ ಸಾಕ್ಷಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದ್ದು, ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದ ನಂತರ ಸಾಕ್ಷಿಗಳಿಗೆ ಸಮನ್ಸ್ ನೀಡಲಾಗುವುದು.
ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಿ ನ್ಯಾಯಾಲಯ ವಿಚಾರಣೆ ಆರಂಭಿಸಲಿದೆ. ದರ್ಶನ್ ಕೋರಿಕೆಯಂತೆ ಜೈಲಿನ ಅಧಿಕಾರಿಗಳು ಕಂಬಳಿ ಒದಗಿಸಿದ್ದಾರೆ.
