HomeKarnatakaರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ್ದ ಕಾರು, ಜೀಪ್ ಪೊಲೀಸ್ ವಶಕ್ಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ್ದ ಕಾರು, ಜೀಪ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಳಸಾಗಿದೆ ಎನ್ನಲಾದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೀಂದ್ರ ಸ್ಕಾರ್ಪಿಯೋ ಹಾಗೂ ಕೆಂಪು ಬಣ್ಣದ ಥಾರ್ ಜೀಪ್ ರೇಣುಕಾಸ್ವಾಮಿ ಕೂಡಿ ಹಾಕಿದ್ದ ಆರ್.ಆರ್.ನಗರ ಬಳಿಯ ಶೆಡ್ ಗೆ ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರಿ ಈ ಎರಡೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಕೆಲ ವಸ್ತುಗಳು ಪತ್ತೆಯಾಗಿವೆ. ಲೇಡಿಸ್ ವ್ಯಾನಿಟಿ ಬ್ಯಾಗ್, ಮದ್ಯದ ಬಾಟಲಿಗಳು ಸಿಕ್ಕಿದ್ದು, ಅವುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಜೀಪ್ ದರ್ಶನ್ ಆಪ್ತ ವಿನಯ್ ಹೆಸರಲ್ಲಿ ನೋಂದಣಿಯಾಗಿದೆ. ಬೆಂಗಳೂರಿನಲ್ಲಿ ಓಡಾಡಲು ದರ್ಶನ್ ಇದೇ ಜೀಪ್ ಬಳಸುತ್ತಿದ್ದರು ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular