HomeLatest Newsರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ವಿರುದ್ದ ದೋಷಾರೋಪ...

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ವಿರುದ್ದ ದೋಷಾರೋಪ ನಿಗದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಸೆಪ್ಟೆಂಬರ್ 25ಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಸೆಪ್ಟೆಂಬರ್ 25 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಅದೇ ದಿನ ಆರೋಪಿಗಳ ವಿರುದ್ಧ ಪೊಲೀಸರು ಹೊರಿಸಿರುವ ರೇಣುಕಾಸ್ವಾಮಿ ಅಪಹರಣ, ಕೊಲೆ, ಸುಲಿಗೆ, ಸಾಕ್ಷ್ಯ ನಾಶ ಸೇರಿದಂತೆ ಇತರೆ ದೋಷಾರೋಪಗಳ, ನಿಗದಿಯಾಗಲಿದೆ.

ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ ಅರ್ಜಿ ಕುರಿತ ಆದೇಶವನ್ನು ಸೆಪ್ಟೆಂಬರ್ 25 ರಂದು ನ್ಯಾಯಾಲಯ ಪ್ರಕಟಿಸಲಿದೆ. ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಜೈಲು ಅಧಿಕಾರಿಗಳು ಪಾಲಿಸಿಲ್ಲವೆಂದು ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಕುರಿತಾದ ಆದೇಶವೂ ಸೆಪ್ಟೆಂಬರ್ 25ರಂದು ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದೀಪಕ್ ಮತ್ತು ಪ್ರದೋಷ್ ಅವರನ್ನು ದೋಷಾರೋಪಣೆಯಿಂದ ಕೈ ಬಿಡಲು ಕೋರ್ಟ್ ನಿರಾಕರಿಸಿದ್ದು, ಈ ಕುರಿತಾದ ಅರ್ಜಿಯನ್ನು ವಜಾಗೊಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular