BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದ್ದು, ಆರೋಪಿಗಳಿಗೆ ಜೈಲುವಾಸವೇ ಗತಿಯಾಗಿದೆ.

ಕೊಲೆ ಕೇಸ್ ನಲ್ಲಿ ಅಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಜೈಲಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು.

ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರು ಜೈಲಿನಿಂದ ನಾಲ್ವರು ಆರೋಪಿಗಳು ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್, ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read