HomeEntertainmentBREAKING NEWS: ನಟ ದರ್ಶನ್ ಗೆ ಬಿಗ್ ಶಾಕ್: ಕಾನೂನು ಹೋರಾಟದಲ್ಲಿ ಹಿನ್ನಡೆ: ಜಾಮೀನು ಅರ್ಜಿ...

BREAKING NEWS: ನಟ ದರ್ಶನ್ ಗೆ ಬಿಗ್ ಶಾಕ್: ಕಾನೂನು ಹೋರಾಟದಲ್ಲಿ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಇಂದು ಜಾಮೀನಿನ ನಿರೀಕ್ಷೆಯಲ್ಲಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ಇನ್ನೊಂದೆಡೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಗೂ ಕೋರ್ಟ್ ಜಾಮೀನು ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular