HomeEntertainmentBREAKING NEWS: ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್: ಕಿಚ್ಚ ಸುದೀಪ್ ಮೊದಲ...

BREAKING NEWS: ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್: ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಕಿಚ್ಚ ಸುದೀಪ್, ಬಾಳಿ, ಬದುಕ ಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಸತ್ಯ ಹೊರತರಲು ಮಾಧ್ಯಮಗಳು, ಪೊಲೀಸರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯಸಿಗಬೇಕು. ಅವರ ಪತ್ನಿ, ಹುಟ್ಟಬೇಕಿರುವ ಮಗುವಿಗೆ ನ್ಯಾಯ ಸಿಗಬೇಕು. ಅದರ ಜೊತೆಗೆ ಜನರಿಗೆ ಕಾನೂನಿನ ಮೇಲೆ ನಂಬಿಕೆ ಬರುವಂತಹ ಕೆಲಸವಾಗಬೇಕು ಎಂದು ಹೇಳಿದ್ದಾರೆ.

ಸೆಲೆಬ್ರಿಟಿಗಳು ಎಂದ ಮಾತ್ರಕ್ಕೆ ನಾವ್ಯಾರು ದೇವರಲ್ಲ. ಸೆಲೆಬ್ರಿಟಿಗಳು ತಪ್ಪೇ ಮಾಡಲ್ಲ ಎಂಬ ನಂಬಿಕೆ ಬೇಡ. ಏನು ಮಾಡಬಾರದು ಎಂಬುದನ್ನು ಎಚ್ಚೆತ್ತುಕೊಂಡು ಸಾಗಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರವಾಗಿ ಮಾತನಾಡಿದ ಕಿಚ್ಚ ಸುದೀಪ್, ಮೊದಲು ತನಿಖೆಯಾಗಿ ತಪ್ಪು ಯಾರು ಮಾಡಿದ್ದಾರೆ ಎಂಬ ಬಗ್ಗೆ ಸತ್ಯಾಸತ್ಯತೆ ಹೊರಬರಲಿ. ಇಲ್ಲಿನಿಂತು ಜಡ್ಜ್ ಮಾಡಲು ನಾವು ಯಾರು? ಬ್ಯಾನ್ ಮಾಡುವುದಕ್ಕಿಂತ ಮೊದಲು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯಸಿಗುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಫಿಲ್ಮ್ ಚೇಂಬರ್ ಕ್ರಮವಹಿಸಲಿ ಎಂದರು.

ಪ್ರತಿ ಬಾರಿ ಚಿತ್ರರಂಗದ ಮೇಲೆ ಒಂದಲ್ಲ ಒಂದು ಕಾರಣಕ್ಕೆ ಆರೋಪಗಳು ಬರುತ್ತಿದೆ. ಚಿತ್ರರಂಗಕ್ಕೂ ನ್ಯಾಯಸಿಗಬೇಕು. ಚಿತ್ರರಂಗಕ್ಕೆ ಕಪ್ಪುಚುಕ್ಕೆ ಬರುವುದನ್ನು ನಾನು ಇಷ್ಟಪಡುವುದಿಲ್ಲ. ಹಲವು ಹಿರಿಯರು ಶ್ರಮಿಸಿ ಚಿತ್ರರಂಗವನ್ನು ಕಟ್ಟಿದ್ದಾರೆ. ಸ್ನೇಹಿತ ಇರಲಿ, ಯಾರೇ ಆಗಿರಲಿ ಚಿತ್ರರಂಗಕ್ಕೆ ಕಪ್ಪುಚುಕ್ಕೆ ಬರಬಾರದು ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular