HomeKarnatakaBREAKING NEWS: ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್

BREAKING NEWS: ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ದರ್ಶನ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ಪೊಲೀಸರು ಹೆಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಅದರಲ್ಲಿ ಕೊಲೆ ನಡೆದ ಸ್ಥಳದ ಫೋಟೋ ರಿಕವರಿ ಮಾಡಿದ್ದಾರೆ.

ಪ್ರತ್ಯಕ್ಷದರ್ಶಿ ಮೊಬೈಲ್ ಫೋನ್ ನಿಂದ 2 ಫೋಟೋಗಳನ್ನು ಪೊಲೀಸರು ರಿಕವರಿ ಮಾಡಿದ್ದಾರೆ. ಆರೋಪಿ ಪುನೀತ್ ಮೊಬೈಲ್ ನಲ್ಲಿದ್ದ 2 ಫೋಟೋಗಳನ್ನು ರಿಕವರಿ ಮಾಡಲಾಗಿದ್ದು, ರೇಣುಕಾಸ್ವಾಮಿ ಹತ್ಯೆ ನಡೆದ ಶೆಡ್ ನಲ್ಲಿ ದರ್ಶನ್ ನಿಂತಿರುವ ಫೋಟೋಗಳಾಗಿವೆ.

ಬ್ಲ್ಯಾಕ್ ಜೀನ್ಸ್, ಬ್ಲೂ ಟೀ ಶರ್ಟ್ ಧರಿಸಿ ಎಲ್ಲಾ ಆರೋಪಿಗಳ ಜೊತೆ ದರ್ಶನ್ ನಿಂತುಕೊಂಡಿರುವ ಫೋಟೋ ಇದಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಗೆ ಇನ್ನಷ್ಟು ಸಂಕಷ್ಟ ಎದುರಾಗುವ ಸಾಧತೆ ಇದೆ. ಈ ಹಿಂದೆ ಆರೋಪಿ ಪುನೀತ್ ತನ್ನ ಮೊಬೈಲ್ ನಲ್ಲಿದ್ದ ಎಲ್ಲಾ ಫೋಟೋಗಳನ್ನು ಡಿಲಿಟ್ ಮಾಡಿದ್ದ. ಮೊಬೈಲ್ ವಶಕ್ಕೆ ಪಡೆದಿದ್ದ ಪೊಲೀಸರು ಎಫ್ ಎಸ್ ಎಲ್ ಗೆ ರವಾನಿಸಿದ್ದರು. ಇದೀಗ ಫೋಟೋ ರಿಕವರಿ ಮಾಡಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಎರಡು ಫೋಟೋ ಬಗ್ಗೆ ಪೊಲೀಸರು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular