ಪೊಲೀಸ್ ವಾಹನದಿಂದಲೇ ಅಭಿಮಾನಿಗಳತ್ತ ಕೈಬೀಸಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, 13 ವರ್ಷಗಳ ಬಳಿಕ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ.

ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್, ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜುಲೈ 4ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ನ್ಯಾಯಾಲಯದ ಬಳಿ ನಟ ದರ್ಶನ್ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದಾರೆ. ನಟ ದರ್ಶನ್ ಕೋರ್ಟ್ ನಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳಿಂದ ನೂಕು ನುಗ್ಗಲು ಉಂಟಾಗಿದೆ.

ದರ್ಶನ್ ಪೊಲೀಸ್ ವಾಹನವನ್ನು ಹತ್ತಿ ಕುಳಿತುಕೊಳ್ಳುತ್ತಿದ್ದಂತೆ ಅಭಿಮಾನಿಗಳು ಪೊಲೀಸ್ ವಾಹನದ ಬಳಿ ಜಮಾವಣೆಗೊಂಡಿದ್ದು, ದರ್ಶನ್, ದರ್ಶನ್ ಎಂದು ಕೂಗಿದ್ದಾರೆ. ಪೊಲೀಸ್ ವಾಹನದ ಒಳಗಿನಿಂದಲೇ ದರ್ಶನ್ ಅಭಿಮಾನಿಗಳತ್ತ ಕೈಬೀಸಿ ಸಾಗಿದ್ದಾರೆ.

ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಕರೆದೊಯ್ದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read