HomeKarnatakaBIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ & ಗ್ಯಾಂಗ್ ನ ನಾಲ್ವರು ಆರೋಪಿಗಳು ತುಮಕೂರು...

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ & ಗ್ಯಾಂಗ್ ನ ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಸ್ಥಳಾಂತರ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ನ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲಾಗಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲುಪಾಲಾಗಿದ್ದು, ಪರಪ್ಪನ ಅಗ್ರಹಾರ ಜೈಲುಸೇರಿದ್ದಾರೆ. ಈ ನಡುವೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್ ನಾಯಕ್ ನನ್ನು ಸ್ಥಳಾಂತರಿಸಲಾಗಿದ್ದು, ತುಮಕೂರು ಕಾರಾಗೃಹ ಪೊಲೀಸರು ವಾಹನಗಳಲ್ಲಿ ಆರೋಪಿಗಳನ್ನು ಕರೆದೊಯ್ದಿದ್ದಾರೆ. ಭದ್ರತೆಗಾಗಿ ಇನ್ಸ್ ಪೆಕ್ಟರ್, 10ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಬೆಂಗಾವಲು ಪಡೆಯೊಂದಿಗೆ ನಾಲ್ವರು ಆರೋಪಿಗಳನ್ನು ಶಿಫ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular