HomeKarnatakaBIG NEWS: ಜೈಲಿನಲ್ಲಿ ಮನೆ ಊಟ, ಹಾಸಿಗೆ, ಪುಸ್ತಕ ನೀಡಲು ಮನವಿ: ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ...

BIG NEWS: ಜೈಲಿನಲ್ಲಿ ಮನೆ ಊಟ, ಹಾಸಿಗೆ, ಪುಸ್ತಕ ನೀಡಲು ಮನವಿ: ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಜೈಲಿನ ಊಟ ಒಗ್ಗೂಡದ ಕಾರಣಕ್ಕೆ ತನಗೆ ಜೈಲಿನಲ್ಲಿ ಮನೆ ಊಟ ನೀಡುವಂತೆ ಹಾಗೂ ಬಟ್ಟೆ, ಹಾಸಿಗೆ, ಪುಸ್ತಕ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಪೀಠ, ಈ ಬಗ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನಟ ದರ್ಶನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಜೈಲಿನಲ್ಲಿ ಮನೆ ಊಟ, ಬಟ್ಟೆ, ಹಾಸಿಗೆ, ಪುಸ್ತಕ ವಿಚಾರವಾಗಿ ನಟ ದರ್ಶನ್ ಸಲ್ಲಿರುವ ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಜುಲೈ 26ರೊಳಗೆ ನಡೆಸಿ, ತೀರ್ಮಾನ ಕೈಗೊಳ್ಳಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular