HomeKarnatakaBREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರದಿಂದ ಬೇರೆ ಜೈಲಿಗೆ ಶಿಫ್ಟ್ ಸಾಧ್ಯತೆ

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರದಿಂದ ಬೇರೆ ಜೈಲಿಗೆ ಶಿಫ್ಟ್ ಸಾಧ್ಯತೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನ 7 ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೊಲೆ ಆರೋಪಿಗೆ ಜೈಲಿನಲ್ಲಿ ಸಿಗುತ್ತಿರುವ ವ್ಯವಸ್ಥೆಗಳ ಬಗ್ಗೆ ತನಿಖೆ ನಡೆಸುವಂತೆಯೂ ಸೂಚಿಸಲಾಗಿದೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ನಟ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜೈಲಿನ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ದರ್ಶನ್ ನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಇಂದು ಸಂಜೆ ವೇಳೆಗೆ ಜೈಲಧಿಕಾರಿಗಳು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular