HomeKarnatakaBIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ...

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲುಸೇರಿದ್ದು, ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಾಕ್ಷ್ಯಗಳ ಸಂಗ್ರಹವಾಗಿದ್ದು, ಪೊಲೀಸರು ಚಾರ್ಜ್ ಶೀಟ್ ಮಾಡ್ತಾರೆ ಎಂದು ತಿಳಿಸಿದ್ದಾರೆ.

ಕೊಲೆ ಕೇಸ್ ನಲ್ಲಿ ಯಾರನ್ನೂ ರಕ್ಷಿಸುವ ಅಗತ್ಯವು ಇಲ್ಲ, ರಕ್ಷಿಸುವುದೂ ಇಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ. ಸಾಕ್ಷ್ಯಗಳ ಸಂಗ್ರಹವಾಗಿದೆ. ಶೀಘ್ರದಲ್ಲಿಯೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular