HomeKarnatakaರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ ನೀಡಿದ್ದ 'ಡಿ' ಗ್ಯಾಂಗ್ ನ ಆರೋಪಿ ಅರೆಸ್ಟ್

ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿ ಚಿತ್ರಹಿಂಸೆ ನೀಡಿದ್ದ ‘ಡಿ’ ಗ್ಯಾಂಗ್ ನ ಆರೋಪಿ ಅರೆಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಈವರೆಗೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬೆಚ್ಚಿ ಬೀಳಿಸುವಂತಹ ಸಂಗತಿ ಬಯಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ್ದಾರೆ. ದೇಹದ 34 ಕಡೆ ಹಲ್ಲೆ ನಡೆಸಿರುವುದು ಪತ್ತೆಯಾಗಿದೆ. ಮರ್ಮಾಂಗಕ್ಕೂ ಕರೆಂಟ್ ಶಾಕ್ ನೀಡಿದ್ದು, ಎದೆಗೆ ಒದ್ದ ಪರಿಣಾಮ ಪಕ್ಕೆಲುಬು ಮುರಿದು ಶ್ವಾಸಕೋಶಕ್ಕೆ ಚುಚ್ಚಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ರಾಜು ಅಲಿಯಾಸ್ ಧನರಾಜ್ ಬಂಧಿತ ಆರೋಪಿ. ರಾಜು ಆರೋಪಿ ನಂದೀಶ್ ಜೊತೆ ಬೆಂಗಳೂರಿನಲ್ಲಿ ಕೇಬಲ್ ಕೆಲಸ ಮಾಡುತ್ತಿದ್ದ. ಆತನನ್ನು ರೇಣುಕಾಸ್ವಾಮಿ ಕೂಡಿಹಾಕಿದ್ದ ಶೆಡ್ ಗೆ ಕರೆಸಿಕೊಂಡಿದ್ದ ನಂದೀಶ್. ಅಲ್ಲದೇ ಎಲೆಕ್ಟ್ರಿಕಲ್ ಮೆಗ್ಗರ್ ಮಷಿನ್ ಕೂಡ ತರಿಸಿಕೊಂಡಿದ್ದಾರೆ. ಈ ಮೆಷಿನ್ ಮೂಲಕ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ವಿಕೃತ ಅಟ್ಟಹಾಸ ಮೆರೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular