ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ & ಗ್ಯಾಂಗ್ ಅರ್ಜಿ ವಿಚಾರಣೆ ನಡೆದಿದ್ದು, ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನ ಜುಲೈ 22 ಕ್ಕೆ ಮುಂದೂಡಿದೆ.
ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ವಿಚಾರಣೆ ನಡೆದಿದೆ.
ಬಂಧನದ ಕಾರಣಗಳನ್ನಷ್ಟೇ ನಾವು ಕೇಳುತ್ತಿದ್ದೇವೆ. ಬಂಧನ ಕಾನೂನು ಬದ್ದವಾಗಿದೆ ಎನ್ನುವುದಾದರೆ ಉತ್ತರ ಕೊಡಿ ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹಾಗೂ ಅರ್ಜಿ ವಿಚಾರಣೆಯನ್ನ ಜು.22 ಕ್ಕೆ ಮುಂದೂಡಿ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿತ್ತು. . ವಾದ ವಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.