ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜಡ್ಜ್ ಆದೇಶಿಸಿದ್ದಾರೆ.
ಎ6 ಜಗದೀಶ್, ಎ7 ಅನುಕುಮಾರ್ ರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಐವರು ಆರೋಪಿಗಳು ನಿನ್ನೆ ಜೈಲು ಸೇರಿದ್ದರು. ಹೌದು, ಐವರು ಆರೋಪಿಗಳಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದರು. ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ11 ನಾಗರಾಜು, ಎ12 ಲಕ್ಷ್ಮಣ, ಎ14 ಪ್ರದೋಶ್ ಜೈಲಿಗೆ ಕಳಿಸಲಾಗಿತ್ತು. ಇದೀಗ ಎ-6 ಜಗದೀಶ್, ಎ-7 ಅನುಕುಮಾರ್ ಕೂಡ ಜೈಲು ಪಾಲಾಗಿದ್ದಾರೆ.
ದರ್ಶನ್ ಮತ್ತು ಇತರೆ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ತಕ್ಷಣವೇ ಆರೋಪಿಗಳನ್ನು ವಶಕ್ಕೆ ಪಡೆಯಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
You Might Also Like
TAGGED:ರೇಣುಕಾಸ್ವಾಮಿ ಹತ್ಯೆ