ರೇಣುಕಾಸ್ವಾಮಿ ಹತ್ಯೆ ಕೇಸ್: ಪಟ್ಟಣಗೆರೆ ಶೆಡ್ ಮಾಲೀಕರಿಗೆ BBMP ನೋಟಿಸ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದ್ದು, ಬೆಂಗಳೂರಿನ ಆರ್.ಆರ್.ನಗರ ಬಳಿಯ ಪಟ್ಟಣಗೆರೆ ಶೆಡ್ ನಲ್ಲಿ ಈ ಕೃತ್ಯವೆಸಗಲಾಗಿತ್ತು ಎನ್ನಲಾಗಿದೆ. ಈ ಘಟನೆ ನಡೆದ ಶೆಡ್ ನ ಮಾಲೀಕರಿಗೆ ಇದೀಗ ಬಿಬಿಎಂಪಿ ನೋಟಿಸ್ ನೀಡಿದೆ.

ರೇಣುಕಾಸ್ವಾಮಿ ಹತ್ಯೆಗೀಡಾದ ಸ್ಥಳ ಪಟ್ಟಣಗೆರೆ ಶೆಡ್ ಆಗಿದ್ದು, ಈ ಜಾಗದ ಮಾಲೀಕ ಕೆ.ಜಯಣ್ಣಗೆ ಬಿಬಿಎಂಪಿ ನೋಟೀಸ್ ನೀಡಿದೆ. ಶೆಡ್ ಮಾಲೀಕ ಜಯಣ್ಣ, ನಿಗದಿತ ಜಾಗಕ್ಕೆ ಬಿಬಿಎಂಪಿಗೆ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಆರ್.ಆರ್.ನಗರ ವಲಯ ಸಹಾಯಕ ಕಂದಾಯ ಅಧಿಕಾರಿಗಳು ಜಯಣ್ಣಗೆ ನೋಟಿಸ್ ನೀಡಿದ್ದು, 15 ದಿನಗಳ ಒಳಗೆ ಸಂಬಂಧಪಟ್ಟ ದಾಖಲೆ ಸಮೇತ ಕಾರಣ ನೀಡುವಂತೆ ತಿಳಿಸಿದೆ.

ಜಯಣ್ಣ ಪಟ್ಟಣಗೆರೆ ಶೆಡ್ ಗೆ 2008ರಿಂದ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ ಎನ್ನಲಾಗಿದೆ. ಈ ನಿಟ್ಟಿನಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read