HomeKarnatakaBIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ A-1 , ನಟ...

BIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ A-1 , ನಟ ದರ್ಶನ್ A- 2 ಆರೋಪಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು, ಜೈಲು ಪಾಲಾಗುವ ಭೀತಿ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಎ 1 ಆರೋಪಿ, ದರ್ಶನ್ ಎ 2 ಆರೋಪಿ , ಕೆ.ಪವನ್ ಎ-3 ಆರೋಪಿ ಎಂದು ಎಫ್ ಐ ಆರ್ ನಲ್ಲಿ ಹೆಸರಿಸಲಾಗಿದೆ. ಈ ಮೂಲಕ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಪಾತ್ರ ಇರುವುದು ಸ್ಪಷ್ಟವಾಗಿದೆ  ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ) ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ನಾಲ್ಕು ಮಂದಿ ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿದ್ದು, ಈ ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು ಎನ್ನಲಾಗಿದೆ. ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular