HomeKarnatakaBREAKING: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

BREAKING: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಬೆಂಗಳೂರಿನ 57ನೇಸಿಸಿಹೆಚ್ ಕೋರ್ಟ್, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪವಿತ್ರಾಗೌಡಗೆ ಕೋರ್ಟ್ ಶಾಕ್ ನೀಡಿದ್ದು, ಮತ್ತೆ ಪರಪ್ಪನ ಅಗ್ರಹಾರ ಜೈಲುವಾಸವೇ ಗತಿಯಾಗಿದೆ. 57ನೇ ಸಿಸಿಹೆಚ್ ಕೋರ್ಟ್, ಜಾಮೀನು ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಪವಿತ್ರಾ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular