HomeEntertainmentBREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಗ್ಯಾಂಗ್ ನ ಪೊಲೀಸ್ ಕಸ್ಟಡಿ ಇಂದು ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲಿಸರು 13 ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರ‍ೇಟ್ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು.

ಈ ವೇಳೆ ನಟ ದರ್ಶನ್ ಸೇರಿ ಆರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ಕಸ್ಟಡಿಗೆ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎ1 ಆರೋಪಿ ಪವಿತ್ರಾ ಗೌಡ, ಪವನ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ಸೇರಿದಂತೆ 10 ಆರೋಪಿಗಳು ಜೈಲುಪಾಲಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular