HomeKarnatakaBIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೊಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ಬೆಂಅಗ್ಳೂರು ಸೆಷನ್ಸ್ ಕೋರ್ಟ್ ಸೆ.30ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಪ್ರಮುಖ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಮುಂದೂಡಲಾಗಿದೆ.

ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸಹ ಕೋರ್ಟ್ ಸೆ.30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇಂದು ಪವಿತ್ರಾಗೌಡ ಪರ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು. ಈ ವೇಳೆ ಪವಿತ್ರಾಗೆ ರೇಣುಕಾಸ್ವಾಮಿ ಕೊಲ್ಲುವ ಉದ್ದೇಶವಿರಲಿಲ್ಲ. ಆಕೆ ಅಂತಹ ಷಡ್ಯಂತ್ರವನ್ನೂ ನಡೆಸಿರಲಿಲ್ಲ. ಅಲ್ಲದೇ ಪವಿತ್ರಾ ವಿರುದ್ಧ ಸಾಕ್ಷಿ ಹೇಳಿಕೆಯಲ್ಲಿಯೂ ದರ್ಶನ್ ಜೊತೆ ಬಂದು ಪವಿತ್ರಾ ರೇಣುಕಾಸ್ವಾಮಿ ಕಪಾಳಕ್ಕೆ ಹೊಡೆದಿದ್ದಳು. ಅದನ್ನು ಬಿಟ್ಟರೆ ಬೇರೆ ಆರೋಪವಿಲ್ಲ ಎಂದು ವಾದಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular