HomeKarnatakaBIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮರಣೋತ್ತರ ವರದಿಯಲ್ಲಿ 'ಡಿ' ಗ್ಯಾಂಗ್ ನ ರಕ್ಕಸ ಕೃತ್ಯ...

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮರಣೋತ್ತರ ವರದಿಯಲ್ಲಿ ‘ಡಿ’ ಗ್ಯಾಂಗ್ ನ ರಕ್ಕಸ ಕೃತ್ಯ ಬಯಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಮತ್ತಷ್ಟು ರಕ್ಕಸ ಕೃತ್ಯಗಳು ಬಯಲಾಗಿವೆ.

ರೇಣುಕಾಸ್ವಾಮಿಯನ್ನು ‘ಡಿ’ ಗ್ಯಾಂಗ್ ಬೀಭತ್ಸವಾಗಿ ಕೊಲೆ ಮಾಡಿದೆ ಎಂಬುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆ ವರದಿ ಬೆಚ್ಚಿ ಬೀಳಿಸುವಂತಿದೆ. ರೇಣುಕಾಸ್ವಾಮಿ ದೇಹದ 34 ಕಡೆ ಗಂಭೀರ ಗಾಯಗಳಾಗಿವೆ. ಪಕ್ಕೆಲುಬು ಮುರಿದು, ಮೂಳೆ ಶ್ವಾಸಕೋಶಕ್ಕೆ ಚುಚ್ಚಿಕೊಂಡಿದೆ.

ಆರೋಪಿಗಳ ಹೊಡೆತಕ್ಕೆ ದೇಹದ ಹಲವೆಡೆ ರಕ್ತ ಹೆಪ್ಪುಗಟ್ಟಿದೆ. ಮರ್ಮಾಂಗಕ್ಕೂ ಬಲವಾದ ಪೆಟ್ಟುಬಿದ್ದಿದೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ದರ್ಶನ್ ಹಾಗೂ ಗ್ಯಾಂಗ್ ಬೆಂಗಳೂರಿನ ಆರ್.ಆರ್.ನಗರದ ಪಟ್ಟಣಗೆರೆ ಶೆಡ್ ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular