HomeKarnatakaBIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿಯೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾರು ಎಷ್ಟೇ ದೊಡ್ಡವರಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಎಲ್ಲರಿಗೂ ಒಂದೇ ಎಂದರು.

ಸಂತ್ರಸ್ತ ಕುಟುಂಬದ ಜೊತೆ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ. ಸರ್ಕಾರ ಯಾರ ಒತ್ತಡಕ್ಕೂ ಮಣಿಯಲ್ಲ. ತಪ್ಪಿತಸ್ಥರಿಗೆ ಖಂಡಿತವಾಗಿಯೂ ಕಠಿಣ ಶಿಕ್ಷೆಯಾಗಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular