HomeKarnatakaRenukaswamy Murder Case : ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ;...

Renukaswamy Murder Case : ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ‘ಎಂದರು.

ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular