ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾಕ್ಷಿದಾರರಿಗೆ ದರ್ಶನ್ ಅಭಿಮಾನಿಗಳಿಂದ ಬೆದರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ನಟ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ.

ದರ್ಶನ್ ಅಭಿಮಾನಿಗಳ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರ ಹೆಸರನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದು ಗಂಭೀರ ಸ್ವರೂಪವಲ್ಲದ ಕೃತ್ಯ ನಮೂದಿಸಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಸಾಕ್ಷಿಗಳಿಗೆ ಹೆದರಿಕೆ ಹಾಕಿದವರ ವಿರುದ್ಧ ಕೊಲೆ ಪ್ರಕರಣದಡಿಯಲ್ಲೇ ತನಿಖೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣಗೆರೆ ಶೆಡ್ ನ ಕಾವಲುಗಾರರು, ದರ್ಶನ್ ಅವರ ಕೆಲವು ಸಹಚರರು ಸೇರಿದಂತೆ ಅನೇಕರನ್ನು ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿ ಹೇಳಿಕೆ ದಾಖಲಿಸಿಕೊಂಡಿದ್ದು, ಸಾಕ್ಷಿದಾರರಾದ ಕೆಲವರಿಗೆ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read