HomeKarnatakaರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಗೆ ಮತ್ತೊಂದು ಶಾಕ್; ಪ್ರದೋಷ್ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳಿಂದ...

ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಗೆ ಮತ್ತೊಂದು ಶಾಕ್; ಪ್ರದೋಷ್ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳಿಂದ ಮಾಫಿ ಸಾಕ್ಷಿಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ತಾನು ಸಂಪೂರ್ಣ ಸತ್ಯ ಬಹಿರಂಗಪಡಿಸುತ್ತೇನೆ ತನ್ನನ್ನು ಮಾಫಿ ಸಾಕ್ಷಿಯಾಗಲು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ಇದರ ಬೆನ್ನಲ್ಲೇ ಪ್ರಕರಣದ ಮತ್ತಿಬ್ಬರು ಆರೋಪಿಗಳು ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಎ8 ಆರೋಪಿ ರವಿಶಂಕರ್ ಹಾಗೂ ಎ10 ಆರೋಪಿ ವಿನಯ್ ಪರ ವಕೀಲರು ನ್ಯಾಯಾಲಯಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ತಮ್ಮ ಕಕ್ಷಿದಾರರನ್ನೂ ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ವಕೀಲರು ಕೋರಿದ್ದಾರೆ. ಈ ಕುರಿತು ಮಧ್ಯಾಹ್ನ ಪ್ರತ್ಯೇಕ ಅರ್ಜಿ ಸಲ್ಲಿಸುವುದಾಗಿ ವಕೀಲರು ಪೀಠಕ್ಕೆ ತಿಳಿಸಿದ್ದಾರೆ. ಪ್ರಕರಣದಲ್ಲಿ ರವಿಶಂಕರ್ ಹಾಗೂ ವಿನಯ್ ಸದ್ಯ ಜಾಮೀನು ಪಡೆದು ಹೊರಗಿದ್ದಾರೆ.

ಈ ನಡುವೆ ಮತ್ತಿಬ್ಬರು ಆರೋಪಿಗಳ ಮನವಿಯನ್ನು ತಮ್ಮ ಅರ್ಜಿಯೊಂದಿಗೆ ಸೇರಿಸಬಾರದು ಎಂದು ಎ14 ಪ್ರದೋಷ್ ಪರ ವಕೀಲ ದಿವಾಕರ್ ಸೆಷನ್ಸ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮೊದಲು ತಮ್ಮ ಕಕ್ಷಿದಾರ ಪ್ರದೋಷ್ ಅವರ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳಲಿ, ಆ ನಂತರ ಪ್ರಾಸಿಕ್ಯೂಷನ್ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಿ ಎಂದು ಪ್ರತಿಪಾದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ 59ನೇ ಸೆಷನ್ಸ್ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಕೆಲಕಾಲ ಮುಂದೂಡಿದೆ. ಪ್ರದೋಷ್ ಈಗಾಗಲೇ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದು, ಈಗ ಮತ್ತಿಬ್ಬರು ಆರೋಪಿಗಳು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಮನವಿ ಮಾಡಿರುವುದು ಪ್ರಕರಣದ ತನಿಖೆಗೆ ನಿರ್ಣಾಯಕವಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular