ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಮುಖ ಆರೋಪಿ ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಗೌರವ್ ಶೆಟ್ಟಿ, ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ.
ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರಿನ 59 ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಎಸ್ಕೇಪ್ ಆದಂತಾಗಿದೆ.
ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದ.
ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜೊತೆ ಕಾನ್ಫರೇನ್ಸ್ ಕರೆ ಮಾಡಿ ಸಾಕ್ಷಿಗೆ ಬೆದರಿಕೆ ಹಾಕಿದ್ದು ಗೊತ್ತಾಗಿತ್ತು. ಬಳಿಕ ಗೌರವ್ ಶೆಟ್ಟಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ. ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ಗೌರವ್ ಶೆಟ್ಟಿ, ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಟಿಟಿಡಿ ಉಪ ಇಒ ಲೋಕನಾಥಮ್ ಮನೆ ಮೇಲೆ ಎಸಿಬಿ ದಾಳಿ: 5 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ
ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿ(ಟಿಟಿಡಿ)ಯಲ್ಲಿ ಉಪ ಇಒ ಆಗಿದ್ದ ಮೆಂಡು ಲೋಕನಾಥಮ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ಬರೋಬ್ಬರಿ 5 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.
ಟಿಟಿಡಿಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ಉಪ ಇಒ ಹಂತಕ್ಕೆ ಏರಿದ್ದ ಮೆಂಡು ಲೋಕನಾಥಮ್ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಸಾಮಾನ್ಯ ಗುಮಾಸ್ತರಾಗಿ ಟಿಟಿಡಿಗೆ ಸೇರಿದ್ದ ಮೆಂಡು ಲೋಕನಾಥಮ್, ಪ್ರಮುಖ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಾ ಉಪ ಇಒ ಹುದ್ದೆಗೆ ಬಡ್ತಿ ಪಡೆದಿದ್ದರು. ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿರುವ ಅವರ ನಿವಾಸಗಳು, ಕಚೇರಿ ಹಾಗೂ ಹತ್ತಿರದ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಸರ್ಕಾರಿ ಲೆಕ್ಕಾಚಾರದ ಪ್ರಕಾರ 5 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಆದರೆ, ಪ್ರಸ್ತುತ ಮುಕ್ತ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಹತ್ತಾರು ಕೋಟಿ ರೂಪಾಯಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ತನಿಖಾ ತಂಡಗಳು ನಡೆಸಿದ ಪರಿಶೀಲನೆಯಲ್ಲಿ ತಿರುಪತಿ ಸುತ್ತಮುತ್ತಲಿನ ಐಷಾರಾಮಿ ವಿಲ್ಲಾಗಳು, ದುಬಾರಿ ಪ್ಲಾಟ್‌ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಬೃಹತ್ ಪ್ರಮಾಣದ ಕೃಷಿ ಭೂಮಿಯ ದಾಖಲೆಗಳು ಪತ್ತೆಯಾಗಿವೆ. ಇದರ ಜೊತೆಗೆ ಬ್ಯಾಂಕ್ ಲಾಕರ್‌ಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಇರಿಸಲಾಗಿದ್ದ ಬೃಹತ್ ಪ್ರಮಾಣದ ನಗದು, ಅಪಾರ ಪ್ರಮಾಣದ ಚಿನ್ನಾಭರಣಗಳು ಹಾಗೂ ಬೆಳ್ಳಿ ವಸ್ತುಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಬೇನಾಮಿ ಹೆಸರುಗಳಲ್ಲಿರುವ ಆಸ್ತಿಗಳು ಹಾಗೂ ಬ್ಯಾಂಕ್ ವಹಿವಾಟುಗಳ ಬಗ್ಗೆ ಆಳವಾದ ತನಿಖೆ ಮುಂದುವರಿದಿದ್ದು, ಅಧಿಕಾರ ದುರುಪಯೋಗಪಡಿಸಿಕೊಂಡು ಗಳಿಸಿದ ಪ್ರತಿಯೊಂದು ಅಕ್ರಮ ಆಸ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯ ನೌಕರನೊಬ್ಬ ಶ್ರೀವಾರಿಯ ಸೇವೆಯ ಹೆಸರಿನಲ್ಲಿ ಇಷ್ಟೊಂದು ಬೃಹತ್ ಮಟ್ಟದ ಸಂಪತ್ತು ಗಳಿಸಿದ್ದು ಹೇಗೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಶಂಕಿತ ವ್ಯಕ್ತಿಗಳ ಬಗ್ಗೆಯೂ ತನಿಖೆಗೆ ಎಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ.

