HomeKarnatakaತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ರಿಪೇರಿ: ರೈತರಿಗೆ ಗುಡ್‌ ನ್ಯೂಸ್

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ರಿಪೇರಿ: ರೈತರಿಗೆ ಗುಡ್‌ ನ್ಯೂಸ್

“ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು” ಎಂದು ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸಭಾನಾಯಕ ಎನ್.ಎಸ್. ಭೋಸರಾಜು ಹೇಳಿದರು.

ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ ಗೇಟ್‌ಗಳ ಅಳವಡಿಕೆ ಕಾಮಗಾರಿಯ ವೀಕ್ಷಣೆ ಮಾಡಿ, ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

“ಈಗಾಗಲೇ ತುಂಗಭದ್ರಾ ಜಲಾಶಯದ 18 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, 5 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದ ವೇಳೆಗೆ ಒಟ್ಟು 23 ಗೇಟ್‌ಗಳ ಕೆಲಸ ಮುಗಿಯುವ ನಿರೀಕ್ಷೆಯಿದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಎಕ್ಸ್ಪರ್ಟ್ ಟೀಮ್ ಮತ್ತು ಚೀಫ್ ಎಂಜಿನಿಯರ್‌ಗಳ ಪ್ರಕಾರ, ಗೇಟ್ ಬದಲಾವಣೆಯ ಸಮಯದಲ್ಲಿ ಹಳೆಯ ಅಣೆಕಟ್ಟಿನ ರಚನೆಗೆ ಯಾವುದೇ ತೊಂದರೆಯಾಗಿಲ್ಲ. ಏಪ್ರಿಲ್ ತಿಂಗಳಿನಲ್ಲಿ ಉಳಿದ 10 ಗೇಟ್‌ಗಳನ್ನು ಅಳವಡಿಸಿ, ಮೇ ಅಂತ್ಯದೊಳಗೆ ಎಲ್ಲಾ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ” ಎಂದು ತಿಳಿಸಿದರು.

“ಕಾಮಗಾರಿಯು ನಿರೀಕ್ಷಿತ ಸಮಯಕ್ಕಿಂತ ವೇಗವಾಗಿ ಸಾಗುತ್ತಿದ್ದು, ಜೂನ್‌ನಲ್ಲಿ ಆರಂಭವಾಗುವ ಮುಂಗಾರು ಮಳೆಗಾಲದ ವೇಳೆಗೆ ಜಲಾಶಯವು ಸಂಪೂರ್ಣ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ” ಎಂದರು.

“ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನ ಸಮಸ್ಯೆಗೆ ಪರಿಹಾರವಾಗಿ ‘ನವಲಿ’ ಯೋಜನೆಯ ಪ್ರಸ್ತಾವನೆಯನ್ನು ಮಂಡಳಿ ಮತ್ತು ಸಂಬಂಧಿತ ರಾಜ್ಯ ಸರ್ಕಾರಗಳಿಗೆ ಕಳುಹಿಸಲಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೂ ಸಹ ಪತ್ರ ವ್ಯವಹಾರ ನಡೆಸಲಾಗಿದೆ. ಸಂಬಂದಪಟ್ಟ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ತೆಲಂಗಾಣ ಸರ್ಕಾರದೊಂದಿಗೂ ಸಮನ್ವಯ ಸಾಧಿಸಲು ಪ್ರಯತ್ನಿಸಲಾಗುತ್ತಿದ್ದು, ವಿವಿಧ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ” ಎಂದು ವಿವರಣೆ ನೀಡಿದರು.

“ಈ ತಾಂತ್ರಿಕ ಸಮಸ್ಯೆಗಳು ಬಗೆಹರಿದ ನಂತರ ಪೂರ್ಣ ಸಹಕಾರ ಸಿಗುವ ನಿರೀಕ್ಷೆಯಿದೆ. ಈ ಬಗ್ಗೆ ನಮ್ಮ ರಾಜ್ಯದ ವಿವಿಧ ಚುನಾಯಿತ ಪ್ರತಿನಿಧಿಗಳ ನಿಯೋಗವು ನವದೆಹಲಿಯಲ್ಲಿ ಜಲಶಕ್ತಿ ಸಚಿವಾಲಯದ ಅಧಿಕಾರಿಗಳು ಮತ್ತು ವಿವಿಧ ರಾಜ್ಯಗಳ ಸಂಸದರೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚುನಾವಣಾ ನೀತಿ ಸಂಹಿತೆಯ ಪ್ರಕ್ರಿಯೆಗಳ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಸಚಿವರು ತಿಳಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular