BIG NEWS: RBI ಗವರ್ನರ್ ಶಕ್ತಿಕಾಂತ್ ದಾಸ್ ರಿಂದ ಇಂದು ಹಣಕಾಸು ನೀತಿ ಸಮಿತಿ ಸಭೆ ನಿರ್ಧಾರ ಪ್ರಕಟ: ರೆಪೊ ದರ ಯಥಾಸ್ಥಿತಿ ಗೊಂದಲಕ್ಕೆ ತೆರೆ

ನವದೆಹಲಿ: ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ಸಮಿತಿ ಮೂರು ದಿನಗಳ ಸಭೆ ಫೆಬ್ರವರಿ 8ರಂದು ಕೊನೆಯಾಗಲಿದೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸಮಿತಿಯಲ್ಲಿ ಕೈಗೊಳ್ಳುವ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ರೆಪೊ ದರ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ.

ಹಣಕಾಸು ತಜ್ಞರ ಅಭಿಪ್ರಾಯದ ಪ್ರಕಾರ, ಪ್ರಸ್ತುತ ಸಂದರ್ಭದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ಕಳೆದ ಐದು ಸಭೆಗಳಿಂದ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುತ್ತಿದೆ. ಈ ಬಾರಿಯೂ 6.5ರ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಎಲ್ಲಾ ಗೊಂದಲಗಳಿಗೆ ಇಂದು ತೆರೆ ಬೀಳಲಿದೆ.

2023ರ ಫೆಬ್ರವರಿಯಲ್ಲಿ ಕೊನೆಯದಾಗಿ ರೆಪೊ ದರದಲ್ಲಿ ಬದಲಾವಣೆ ಮಾಡಲಾಗಿತ್ತು, ಜೂನ್ ನಲ್ಲಿ ನಡೆಯುವ ಹಣಕಾಸು ನೀತಿ ಪರಾಮರ್ಶೆ ಸಭೆಯಲ್ಲಿ ರೆಪೊ ದರ ಇಳಿಕೆ ಮಾಡುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read