HomeBusinessಸಾಲಗಾರರಿಗೆ ಸಿಹಿ ಸುದ್ದಿ: ಮನೆ, ವಾಹನ, ವಾಣಿಜ್ಯ ಸಾಲದ ಬಡ್ಡಿ ಇಳಿಕೆ ಮಾಡಿದ SBI

ಸಾಲಗಾರರಿಗೆ ಸಿಹಿ ಸುದ್ದಿ: ಮನೆ, ವಾಹನ, ವಾಣಿಜ್ಯ ಸಾಲದ ಬಡ್ಡಿ ಇಳಿಕೆ ಮಾಡಿದ SBI

ನವದೆಹಲಿ: ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಶೇಕಡ 0.25 ರಷ್ಟು ಇಳಿಕೆ ಮಾಡಿದ್ದು, ಫೆಬ್ರವರಿ 15 ರಿಂದಲೇ ಜಾರಿಗೆ ಬಂದಿದೆ.

ಫೆಬ್ರವರಿ 7ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ರೆಪೊ ದರವನ್ನು ಶೇಕಡ 0.25 ರಷ್ಟು ಕಡಿತಗೊಳಿಸಿ ಶೇಕಡ 6.25ಕ್ಕೆ ಇಳಿಕೆ ಮಾಡಿದ ಬೆನ್ನಲ್ಲೇ ಅನೇಕ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಕಡಿತಗೊಳಿಸಿವೆ. ಇದೀಗ ಎಸ್.ಬಿ.ಐ. ಕೂಡ ಗೃಹ, ವಾಹನ, ವೈಯಕ್ತಿಕ, ವಾಣಿಜ್ಯ ಸಾಲದ ಮೇಲಿನ ಬಡ್ಡಿ ದರಗಳನ್ನು ಕಡಿಮೆ ಮಾಡಿದೆ. ಗ್ರಾಹಕರ ಮಾಸಿಕ ಇಎಂಐ ಮೊತ್ತದಲ್ಲಿ ಇಳಿಕೆಯಾಗಲಿದೆ.

ಆರ್‌ಬಿಐ ರೆಪೊ ದರ ಕಡಿತಗೊಳಿಸಿದ ಬೆನ್ನಲ್ಲೇ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಬಡ್ಡಿ ದರ ಇಳಿಕೆ ಮಾಡಿದ್ದವು. ಇದೀಗ ಎಸ್‌ಬಿಐ ಕೂಡ ಬಡ್ಡಿ ದರ ಇಳಿಕೆ ಮಾಡಿ ರೆಪೊ ದರ ಇಳಿಕೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular