HomeKarnatakaದೆಹಲಿ ಗಣರಾಜ್ಯೋತ್ಸವ 2025 : ಕರ್ನಾಟಕದ 'ಲಕ್ಕುಂಡಿ ಸ್ತಬ್ಧಚಿತ್ರ'ಕ್ಕೆ ಓಟ್ ಮಾಡಲು ಸರ್ಕಾರ ಮನವಿ.!

ದೆಹಲಿ ಗಣರಾಜ್ಯೋತ್ಸವ 2025 : ಕರ್ನಾಟಕದ ‘ಲಕ್ಕುಂಡಿ ಸ್ತಬ್ಧಚಿತ್ರ’ಕ್ಕೆ ಓಟ್ ಮಾಡಲು ಸರ್ಕಾರ ಮನವಿ.!

ಧಾರವಾಡ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಾರಿ ಕರ್ನಾಟಕವು ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28 ರ ಮಧ್ಯರಾತ್ರಿ 12 ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://www.mygov.in/…/vote-your-favourite-tableau-and…/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend.OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular