HomeKarnatakaRepublic Day : ಸಮಾಜದ ಶ್ರೇಯೋಭಿವೃದ್ದಿಯೇ ಸಂವಿಧಾನದ ಆಶಯ : ಸಚಿವ ಮಧು ಬಂಗಾರಪ್ಪ

Republic Day : ಸಮಾಜದ ಶ್ರೇಯೋಭಿವೃದ್ದಿಯೇ ಸಂವಿಧಾನದ ಆಶಯ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಸಂವಿಧಾನ ಕರ್ತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ಹೇಳಿದಂತೆ ಸಮಾಜದ ಶ್ರೇಯೋಭಿವೃದ್ದಿಯೇ ನಮ್ಮ ಸಂವಿಧಾನದ ಅಂತಿಮ ಆಶಯವೆಂದು ಅರಿತು ಅಭಿವೃದ್ದಿಯ ಪಥದಲ್ಲಿ ನಾವೆಲ್ಲ ನಡೆಯೋಣವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು.

ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತವನ್ನು ವಿಶ್ವಮಾನ್ಯ ಹಾಗೂ ಬಲಾಢ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ತಮ್ಮ ತನು-ಮನ-ಧನಗಳಿಂದ ತ್ಯಾಗಗೈದ, ಬಲಿದಾನ ನೀಡಿದ ನಾಯಕರನ್ನು, ಅಸಂಖ್ಯಾತ ಯೋಧರನ್ನು ಹಾಗೂ ದೇಶಾಭಿಮಾನಿಗಳನ್ನು ನೆನೆಯುವುದು ಮತ್ತು ಅವರು ಆಶಿಸಿದಂತೆ ರಾಷ್ಟ್ರವನ್ನು ಅಭ್ಯುದಯದ ಪಥದಲ್ಲಿ ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ  ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾಜವಾದದಲ್ಲಿ ನಂಬಿಕೆಯುಳ್ಳ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನಗರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ತತ್ವದಡಿಯಲ್ಲಿ ನಂಬಿಕೆಯಿರಿಸಿದ್ದು ಹಲವು ಹೊಸ ಯೋಜನೆಗಳ ಮೂಲಕ ನಾಡಿನ ಸರ್ವತೋಮುಖ ಅಭಿವೃದ್ದಿಗೆ ವಿಶೇಷ ಗಮನ ಹರಿಸಿದೆ ಎಂದರು.

ಅಲ್ಲದೇ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಮನೆಯ ಕೋಟ್ಯಾಂತರ ಫಲಾನುಭವಿಗಳಿಗೆ ನೇರ ಆರ್ಥಿಕ ಸೌಲಭ್ಯವನ್ನು ಒದಗಿಸಿದೆ ಎಂದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ. ಸಿಎಸ್ಆರ್ ನಿಧಿಯ ಜೊತೆಗೆ ಇದೇ ವರ್ಷ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರು, ಬಗರ್ಹುಕುಂ ಸಾಗುವಳಿದಾರರು ಮತ್ತು ಅರಣ್ಯ ವಾಸಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲೆಯಲ್ಲಿ ಮತ್ತು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗುತ್ತಿದೆ  ಎಂದರು.

ವಚನ ಸಾಹಿತ್ಯದ ಮೂಲಕ ಆಧ್ಯಾತ್ಮ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾರಿದ 12 ನೇ ಶತಮಾನದ ಶರಣ, ಅನುಭವ ಮಂಟಪದ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುಗಳ ಜನ್ಮಸ್ಥಳ ಬಳ್ಳಿಗಾವಿಯನ್ನು ಸಮಗ್ರ ಅಭಿವೃದ್ದಿಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಅಲ್ಲದೇ ನಮ್ಮ ಕೋರಿಕೆಯಂತೆ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ಶೂನ್ಯ ಸಿಂಹಾಸನಾಧೀಶ ಅಲ್ಲಮಪ್ರಭುರವರ ಹೆಸರನ್ನು ನಾಮಕರಣ ಮಾಡಿರುವುದು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಶ್ರೀ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ವಿಷಯ  ಎಂದರು.

ಜಿಲ್ಲೆಯಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರವು ಅನುಮತಿ ನೀಡಿದ್ದು ಈಗಾಗಲೇ ರೂ.20 ಕೋಟಿ ಪ್ರಾರಂಭಿಕ ಅನುದಾನ ಬಿಡುಗಡೆ ಮಾಡಿದೆ. ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ರೂ.22 ಕೋಟಿ ಮಂಜೂರು ಆಗಿದೆ. ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆ, ಪ್ರವಾಸೋದ್ಯಮ ಅಭಿವೃದ್ದಿಗಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದ್ದು, ಶಿವಮೊಗ್ಗ ಫೋಕಸ್ ಹಾಗೂ ಕೈಗಾರಿಕಾ ಮೇಳ ನಡೆಸಲು ಸಿದ್ದತೆ ನಡೆಸಲಾಗಿದೆ. ಹಾಗೂ ಉದ್ಯೋಗ ಮೇಳ ಮತ್ತು ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ  ಎಂದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular