HomeLatest NewsBIG NEWS: ಗಣರಾಜ್ಯೋತ್ಸವ ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಕೇರಳ ಸಚಿವ ರಾಮಚಂದ್ರನ್ ಕಡನಪಲ್ಲಿ

BIG NEWS: ಗಣರಾಜ್ಯೋತ್ಸವ ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಕೇರಳ ಸಚಿವ ರಾಮಚಂದ್ರನ್ ಕಡನಪಲ್ಲಿ

ಕಣ್ಣೂರು: ದೇಶಾದ್ಯಂತ 77ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಗಣರಾಜ್ಯೋತ್ಸದ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಸಚಿವರೊಬ್ಬರು ಕುಸಿದು ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಕಣ್ಣೂರಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ರಾಮಚಂದ್ರನ್ ಕಡನಪಲ್ಲಿ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಭಾಷಣ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಹಿಮ್ಮುಖರಾಗಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಭದ್ರತಾ ಸಿಬ್ಬಂದಿಗಳು ಹಿಡಿದುಕೊಂಡಿದ್ದಾರೆ.

ಕೂಡಲೇ ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ರಾಮಚಂದ್ರನ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಗಾಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular