ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಉಸ್ತುವಾರಿಯಲ್ಲಿ ‘ರಿಪಬ್ಲಿಕ್ ಆಫ್ ಕಲಬುರಗಿ’: ಛಲವಾದಿ ನಾರಾಯಣಸ್ವಾಮಿ ಮೇಲೆ ಗೂಂಡಾಗಿರಿ: ಬಿಜೆಪಿ ಆಕ್ರೋಶ

ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ ಎಂದು ಬಿಜೆಪಿ ಟೀಕಿಸಿದೆ.

ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಅವರ ಉಸ್ತುವಾರಿಯಲ್ಲಿ ಕಲ್ಬುರ್ಗಿ ರಿಪಬ್ಲಿಕ್ ಆಫ್ ಕಲ್ಬುರ್ಗಿಯಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ  ಅವರ ಮೇಲೆ ಪ್ರಿಯಾಂಕ್ ಖರ್ಗೆ ಅವರ ಗೂಂಡಾ ಪಟಾಲಂ ಹಲ್ಲೆ ಯತ್ನ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಿಯಾಂಕ್ ಖರ್ಗೆ ಅವರೆ, ನಿಮಗೆ ಹೊಡಿ-ಬಡಿ-ಕಡಿ ಆದರ್ಶವಾಗಿದ್ದರೆ, ನಮಗೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಆದರ್ಶವಾಗಿದೆ. ನಿಮ್ಮ ಗೊಡ್ಡು ಬೆದರಿಕೆ ಹಾಗೂ ರೌಡಿಸಂಗೆ ನಾವು ಸಂವಿಧಾನದ ಮೂಲಕ ಉತ್ತರ ನೀಡುತ್ತೇವೆ ಎಂದು ಬಿಜೆಪಿ ತಿಳಿಸಿದೆ.

ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ.

ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ.

ಕಲಬುರ್ಗಿ ಜಿಲ್ಲೆ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸರ್ವಾಧಿಕಾರಿ ನೆರಳಿನಲ್ಲಿ ಬಂದವರ ಕಪಿಮುಷ್ಠಿಯಲ್ಲಿದೆ. ಇಲ್ಲಿ ಪ್ರಜಾಪ್ರಭುತ್ವವೂ ಇಲ್ಲ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದ ಸಂವಿಧಾನಕ್ಕೆ ಗೌರವವೂ ಇಲ್ಲ ಎನ್ನುವುದು ನಾರಾಯಣಸ್ವಾಮಿಯವರ ದಿಗ್ಬಂಧನ ಸಾಕ್ಷಿ ಹೇಳುತ್ತಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಾಂವಿಧಾನಿಕ ಹುದ್ದೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗೌರವವಿದ್ದರೆ ಈ ಕೂಡಲೇ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸೂಕ್ತ ಭದ್ರತೆ ಒದಗಿಸಿ ದಿಬ್ಬಂದನ ವಿಧಿಸಿದ ಗೂಂಡಾಗಳ ಮೇಲೆ ಕ್ರಮ ಜರುಗಿಸಲಿ. ಅವರು ನಿರ್ಲಿಪ್ತರಾದರೆ ತಾವೂ ಪಾಳೇಗಾರಿಕೆ ಸಂಸ್ಕೃತಿಯ ಭಾಗ ಎಂದು ನಿರೂಪಿಸಿಕೊಂಡಂತಾಗುತ್ತದೆ.

ಭಾರತೀಯ ಜನತಾ ಪಾರ್ಟಿ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯಲು ಶೋಷಿತ ಸಮುದಾಯದಿಂದ ಮೇಲೇರಿ ಬಂದ ಛಲವಾದಿ ನಾರಾಯಣಸ್ವಾಮಿ ಅವರಂತಹ ನಾಯಕನ ರಕ್ಷಣೆಗೆ ಬೆನ್ನಿಗೆ ನಿಲ್ಲುವುದು ಆದ್ಯತೆಯಾಗಿ ಪರಿಗಣಿಸಿದೆ ಎಂದು ಬಿಜೆಪಿ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read