HomeLatest Newsಚಿತ್ರದುರ್ಗದಲ್ಲಿ ಕಂಠೀರವ ಸ್ಟುಡಿಯೋ ಒಳಾಂಗಣ ಚಿತ್ರೀಕರಣಕ್ಕೆ ಭೂಮಿ ಮಂಜೂರಾತಿಗೆ ಕೋರಿಕೆ

ಚಿತ್ರದುರ್ಗದಲ್ಲಿ ಕಂಠೀರವ ಸ್ಟುಡಿಯೋ ಒಳಾಂಗಣ ಚಿತ್ರೀಕರಣಕ್ಕೆ ಭೂಮಿ ಮಂಜೂರಾತಿಗೆ ಕೋರಿಕೆ

ಚಿತ್ರದುರ್ಗ: ಒಳಾಂಗಣ ಚಿತ್ರೀಕರಣಕ್ಕೆ ಅನುಕೂಲವಾಗುವಂತೆ ಚಿತ್ರದುರ್ಗ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅವಶ್ಯಕತೆ ಇರುವ ಭೂಮಿ ಮಂಜೂರು ಮಾಡುವಂತೆ ಶ್ರೀ ಕಂಠೀರವ ಸ್ಟುಡಿಯೋಸ್ ನಿಯಮಿತ ಅಧ್ಯಕ್ಷ ಮಹಬೂಬ್ ಪಾಷಾ ಅವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಶ್ರೀ ಕಂಠೀರವ ಸ್ಟುಡಿಯೋಸ್ ನಿಯಮಿತವು ವಜ್ರಮಹೋತ್ಸವ ಆಚರಣೆಯನ್ನು ಆಚರಿಸುತ್ತಿರುವುದರಿಂದ, ಜ್ಞಾಪಕಾರ್ಥವಾಗಿ ಕೆಲವೊಂದು ಅಭಿವೃದ್ಧಿ ಪೂರಕವಾದಂತಹ ಕಾರ್ಯ ಯೋಜನೆ ಕೈಗೊಳ್ಳಬೇಕಾಗಿರುವುದರಿಂದ, ಚಿತ್ರದುರ್ಗ ಜಿಲ್ಲೆಯು ಹೊರಾಂಗಣ ಚಿತ್ರೀಕರಣಕ್ಕೆ ಸೂಕ್ತವಾದಂತಹ ಪ್ರದೇಶವಾಗಿದ್ದು, ಇಲ್ಲಿಯೇ ಒಳಾಂಗಣ ಚಿತ್ರೀಕರಣಕ್ಕೂ ಅನುಕೂಲವಾಗುವಂತೆ ಹಾಗೂ ಜಿಲ್ಲೆಯ ಪ್ರವಾಸೋದ್ಯಮ, ವ್ಯಾಪಾರ ವ್ಯವಹಾರಗಳಲ್ಲೂ ಕನಿಷ್ಟ ಅಭಿವೃದ್ಧಿ ನಿರೀಕ್ಷಿಸಬಹುದಾಗಿದೆ.

ಶ್ರೀ ಕಂಠೀರವ ಸ್ಟುಡಿಯೋಸ್ ನಿಯಮಿತ ಒಳಾಂಗಣ ಚಿತ್ರೀಕರಣಕ್ಕೆ ಅನುಕೂಲವಾಗುವಂತೆ ಚಿತ್ರದುರ್ಗ ಜಿಲ್ಲಾ ಕೇಂದ್ರದ ಸಮೀಪದಲ್ಲಿರುವಂತೆ, ಕನಿಷ್ಟ 25 ಎಕರೆ ಅನುಪಯುಕ್ತ ಭೂಮಿಯನ್ನು ರಸ್ತೆಗೆ ಅಭಿಮುಖವಾಗಿ (ರಾಜ್ಯ ಹೆದ್ದಾರಿ ಅಥವಾ ಜಿಲ್ಲಾ ಹೆದ್ದಾರಿಗಳಿಗೆ) ಹೊಂದುಕೊಂಡಂತೆ ಮಂಜೂರು ಮಾಡಿಕೊಡುವುದು. ಕಂದಾಯ ಇಲಾಖೆ ನಿಗದಿಪಡಿಸಿದ ದರವನ್ನು ರಾಜ್ಯ ಸರ್ಕಾರಿ ಸ್ವೌಮ್ಯದ ಉದ್ಯಮವಾಗಿರುವ ಶ್ರೀ ಕಂಠೀರವ ಸ್ಟುಡಿಯೋಸ್ ನಿಯಮಿತವು ಪಾವತಿಸಿ ಪರಭಾರೆ ಮಾಡಿಕೊಳ್ಳಲಿದ್ದು, ಆದುದರಿಂದ ಸಾಧ್ಯವಾದಷ್ಟು ಶೀಘ್ರವಾಗಿ ಕಾರ್ಯನ್ಮುಖವಾಗಿ ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular